Friday, September 20, 2024

archiveNational Highway

ಸುದ್ದಿ

ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ – ಕಹಳೆ ನ್ಯೂಸ್

ಮಾಣಿ: ರಸ್ತೆ ಮಧ್ಯೆಯಲ್ಲಿ ಲಾರಿಯೊಂದು ಕೆಟ್ಟು ನಿಂತ ಪರಿಣಾಮ ರಸ್ತೆ ಸಂಚಾರಕ್ಕೆ ಅಡಚಣೆಯಾದ ಘಟನೆ ಮಾಣಿ ಸಮೀಪದ ಹಳಿರ ಎಂಬಲ್ಲಿ ನಡೆದಿದೆ. ಮುಂಜಾನೆ ಸುಮಾರು ನಾಲ್ಕು ಗಂಟೆಯ ವೇಳೆ ಲಾರಿಯು ಎಕ್ಸೀಲ್ ತುಂಡಾಗಿ ಕೆಟ್ಟುಹೋದ ಪರಿಣಾಮ ಬೆಳಿಗ್ಗೆ ಯಿಂದಲೇ ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗಿದೆ. ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚಾರ ಅಡಚಣೆಯಾದರಿಂದ ಸಾರ್ವಜನಿಕರು ಸಾಕಷ್ಟು ತೊಂದರೆ ಅನುಭವಿಸಿದರು. ಸ್ಥಳೀಯರು ವಿಟ್ಲ ಠಾಣೆ ಗೆ ತಿಳಿಸಿದರೂ ಕೂಡ ಪೋಲೀಸರು ಸ್ಥಳಕ್ಕೆ ಭೇಟಿ...
ಸುದ್ದಿ

ರಾಷ್ಟ್ರೀಯ ಹೆದ್ದಾರಿ ಅಪಘಾತದಲ್ಲಿ ಬೈಂದೂರು ಪೊಲೀಸ್ ಠಾಣಾ ಸಿಬ್ಬಂದಿ ಸಾವು – ಕಹಳೆ ನ್ಯೂಸ್

ಆತ ಐದು ತಿಂಗಳ ಹಿಂದೆ ಮದುವೆಯಾಗಿದ್ದ. ಆದ್ರೆ ವಿಧಿಯಾಟವೇ ಬೇರೆನೇ ಇತ್ತು. ನಿಂತಿದ್ದ ವಾಹನವೇ ಇವನ ಪಾಲಿನ ಯಮವಾಗಿತ್ತು. ಬೈಂದೂರು ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್ ನಾಗೇಶ್ ಬಿಲ್ಲವ ಡ್ಯೂಟಿ ಮುಗಿಸಿ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದಾಗ 66 ಕಂಬದಕೋಣಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಯೊಂದಕ್ಕೆ ಡಿಕ್ಕಿ ಹೊಡೆದು ಮೃತ ಪಟ್ಟ ಘಟನೆ ನಡೆದಿದೆ. ಎಸ್ಪಿ ಲಕ್ಷ್ಮಣ ನಿಂಬರಗಿ ಸಹಿತ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ನಂತರ ಅಂತ್ಯ...
ಸುದ್ದಿ

ಅ.28ಕ್ಕೆ ನೆಹರುನಗರದ ರೈಲ್ವೇ ಮೇಲ್ಸೇತುವೆ ಅಗಲೀಕರಣಕ್ಕೆ ಟ್ವಿಟರ್ ಅಭಿಯಾನ – ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ ನೆಹರುನಗರ ಅನೇಕ ಶಿಕ್ಷಣ ಪ್ರಿಯರ ನೆಚ್ಚಿನ ತಾಣ. ಯಾಕೆಂದರೆ ಶತಮಾನದ ಇತಿಹಾಸ ಇರುವ ಇಲ್ಲಿನ ವಿವೇಕಾನಂದ ವಿದ್ಯಾವರ್ಧಕ ಸಂಘ ನೆಹರುನಗರದ ವಿವೇಕಾನಂದ ಕ್ಯಾಂಪಸ್‌ನಲ್ಲಿ ಶಿಶುಮಂದಿರದಿಂದ ತೊಡಗಿ ಸ್ನಾತಕೋತ್ತರ ಕೇಂದ್ರಗಳವರೆಗೆ ಅನೇಕ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿದೆ. ಹಾಗಾಗಿಯೇ ಪುತ್ತೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಹರುನಗರದಲ್ಲಿ ಪ್ರತಿನಿತ್ಯ ಸರಿಸುಮಾರು ಎಂಟು ಸಾವಿರ ಮಂದಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ಬಸ್ ಇಳಿದು ವಿವೇಕಾನಂದ ಕ್ಯಾಂಪಸ್ ಕಡೆ ಹೆಜ್ಜೆ ಹಾಕುತ್ತಾರೆ. ಹೀಗೆ ನೆಹರು ನಗರದಿಂದ ವಿವೇಕಾನಂದ...
ಸುದ್ದಿ

ಕಾಮಗಾರಿ ಪೂರ್ಣಗೊಳಿಸಲು ಒತ್ತಾಯಿಸಿ ಧರಣಿ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರಿನ ಪಂಪ್‌ವೆಲ್, ತೊಕ್ಕೊಟ್ಟು ಮೇಲ್ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸಲು ಮತ್ತು ಹೆದ್ದಾರಿ ಅವ್ಯವಸ್ಥೆಯನ್ನು ಸರಿಪಡಿಸಲು ಹಾಗೂ ಸರ್ವಿಸ್ ರಸ್ತೆಗಳ ಮತ್ತು ನಂತೂರು ಮೇಲ್ಸೇತುವೆ ನಿರ್ಮಿಸಲು ಒತ್ತಾಯಿಸಿ ವಿವಿಧ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಪಂಪ್‌ವೆಲ್ ಮೇಲ್ಸೇತುವೆ ಹೋರಾಟ ಸಮಿತಿಯ ನೇತೃತ್ವದಲ್ಲಿ ಪಂಪ್‌ವೆಲ್ ಮೇಲ್ಸೇತುವೆ ಬಳಿ ಧರಣಿ ನಡೆಯಿತು. ಮಂಗಳೂರಿನ ಹೃದಯಭಾಗವಾದ ಪಂಪುವೆಲ್‌ನಲ್ಲಿ ಈ ಹಿಂದೆ ಇದ್ದ ಸರ್ಕಲ್ ಭಾರೀ ಹೆಸರುವಾಸಿಯಾಗಿತ್ತು. ಹೊರರಾಜ್ಯ, ಜಿಲ್ಲೆಗಳಿಂದ ಬರುವಂತಹ ಪ್ರಯಾಣಿಕರಿಗೆ ಪಂಪುವೆಲ್ ಸರ್ಕಲ್ ಗುರುತಿನ ಕೇಂದ್ರವಾಗಿತ್ತು. ಇಲ್ಲಿ...
ಸುದ್ದಿ

ಕೆಎಸ್ಸಾರ್ಟಿಸಿ ಬಸ್ ಬೈಕ್‌ಗೆ ಡಿಕ್ಕಿ: ಬೈಕ್ ಸವಾರರಿಬ್ಬರು ಸಾವು – ಕಹಳೆ ನ್ಯೂಸ್

ಮಂಗಳೂರು: ಮಂಗಳೂರು-ಧರ್ಮಸ್ಥಳ ರಾಷ್ಟ್ರೀಯ ಹೆದ್ದಾರಿಯ ಜಕ್ರಿಬೆಟ್ಟು ಎಂಬಲ್ಲಿ ಭಾನುವಾರ ಕೆಎಸ್ಸಾರ್ಟಿಸಿ ಬಸ್ಸೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಮೃತಪಟ್ಟಿದ್ದಾರೆ ಮಂಗಳೂರು ಕುಡುಪು ನಿವಾಸಿ ಚರಣ್(18) ಹಾಗೂ ಬಂಟ್ವಾಳ ತಾಲೂಕು ವಾಮದಪದವು ಸಮೀಪದ ದಂಡೆಗೋಳಿ ನಿವಾಸಿ ಮುಹಮದ್ ನೌಶಾದ್(18) ಮೃತಪಟ್ಟವರು. ಅವರಿಬ್ಬರು ಮಂಗಳೂರು ಸಂತ ಅಲೋಶಿಯಸ್ ಕಾಲೇಜಿನ ಐಟಿಐ ವಿದ್ಯಾರ್ಥಿಗಳಾಗಿದ್ದು, ಸ್ನೇಹಿತರಾದ್ದರು. ಭಾನುವಾರ ಬೆಳಗ್ಗೆ ಬಿ.ಸಿ ರೋಡ್‌ನಿಂದ ಕಾರಿಂಜ ದೇವಸ್ಥಾನ ಕಡೆ ತೆರಳುತ್ತಿದ್ದರು ಎನ್ನಲಾಗಿದೆ. ಈ ವೇಳೆ ಹೆದ್ದಾರಿಯಲ್ಲಿ...
ಸುದ್ದಿ

ನಾಳೆಯಿಂದ ಶಿರಾಡಿ ಘಾಟಿ ರಸ್ತೆಯಲ್ಲಿ ವಾಹನಗಳ ಸಂಚಾರ: ಶಶಿಕಾಂತ್ ಸೆಂಥಿಲ್ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿ ರಸ್ತೆಯಲ್ಲಿ ಬಸ್‌ಗಳ ಸಂಚಾರಕ್ಕೆ ಕೊನೆಗೂ ಜಿಲ್ಲಾಡಳಿತ ಅವಕಾಶ ಕಲ್ಪಿಸಿದೆ. ಅ. 3ರ ಬೆಳಗ್ಗಿನಿಂದ ಎಲ್ಲ ಪ್ರಯಾಣಿಕ ವಾಹನಗಳೂ ಸಂಚರಿಸಬಹುದು ಎಂದು ದ.ಕ. ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಹಾಸನ ಜಿಲ್ಲಾಧಿಕಾರಿಯವರೊಂದಿಗೆ ಚರ್ಚಿಸಿದ್ದೇನೆ. ಅಲ್ಲದೆ ನಮ್ಮ ಪೊಲೀಸ್ ತಂಡ ಶಿರಾಡಿಯಲ್ಲಿ ಪರಿಶೀಲನೆ ನಡೆಸಿದೆ. ಅದರಂತೆ ವೋಲ್ವೊ, ರಾಜಹಂಸ ಸಹಿತ ಎಲ್ಲ ಬಸ್‌ಗಳೂ ಶಿರಾಡಿ ಘಾಟಿಯಲ್ಲಿ ಸಂಚರಿಸಬಹುದು. ಮುನ್ನೆಚ್ಚರಿಕೆ ಕ್ರಮವಾಗಿ...
ಸುದ್ದಿ

ಸುರತ್ಕಲ್ ಅಕ್ರಮ ಟೋಲ್‌ಗೇಟ್ ಮುಚ್ಚಿಹಾಕಲು ಬೃಹತ್ ಪಾದಯಾತ್ರೆ – ಕಹಳೆ ನ್ಯೂಸ್

ಮಂಗಳೂರು: ಟೋಲ್‌ಗೇಟ್ ವಿರೋಧಿ ಹೋರಾಟ ಸಮಿತಿಯ ವತಿಯಿಂದ ಸುರತ್ಕಲ್ ಅಕ್ರಮ ಟೋಲ್‌ಗೇಟ್ ಮುಚ್ಚಿಹಾಕಲು ಒತ್ತಾಯಿಸಿ, ರಾಷ್ಟ್ರೀಯ ಹೆದ್ದಾರಿ ಗುಂಡಿ ಮುಚ್ಚಲು ಸರ್ವಿಸ್ ರಸ್ತೆಗಳ ನಿರ್ಮಾಣಕ್ಕೆ ಆಗ್ರಹಿಸಿ ಕೂಳೂರು ಜಂಕ್ಷನ್‌ನಿಂದ ಸುರತ್ಕಲ್ ಟೋಲ್‌ಗೇಟ್‌ವರೆಗೆ ಬೃಹತ್ ಪಾದಯಾತ್ರೆ ನಡೆಯಿತು. ಈ ಸಂದರ್ಬದಲ್ಲಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ , ಉಪಮೇಯರ್ ಮುಹಮ್ಮದ್ ಕುಂಜತ್ತಬೈಲ್ , ಮಾಜಿ ಶಾಸಕ ವಿಜಯ ಕುಮಾರ್ ಶೆಟ್ಟಿ, ಮತ್ತಿತರರು ಉಪಸ್ಥಿತರಿದ್ದರು....