Recent Posts

Monday, January 20, 2025

archivePrivate Bus

ದಕ್ಷಿಣ ಕನ್ನಡಸುದ್ದಿ

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಜುಲೈ 1 ರಿಂದ ಸಿಟಿಬಸ್ ಸಂಚಾರ ಆರಂಭ – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಜುಲೈ ೧ ರಿಂದ ಸಿಟಿಬಸ್ ಸಂಚಾರ ಆರಂಭಿಸಲಿದೆ ಎಂದು ಕೆನರಾ ಬಸ್ ಮಾಲಕರ ಅಸೋಸಿಯೇಶನ್ ಅಧ್ಯಕ್ಷ ರಾಜವರ್ಮ ಬಲ್ಲಾಳ್ ಮತ್ತು ದ.ಕ.ಜಿಲ್ಲಾ ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್‌ರಾಜ್ ಆಳ್ವ ತಿಳಿಸಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಬುಧವಾರದಿಂದ ಲಾಕ್ ಡೌನ್ ನ ನಿರ್ಬಂಧದಲ್ಲಿ ಸಡಿಲಿಕೆ ಮಾಡಲಾಗಿದ್ದು, ಶೇಕಡ ೫೦ ರಷ್ಟು ಪ್ರಯಾಣಿಕರು ಬಸ್ ನಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿತ್ತು. ಆದರೆ ಜಿಲ್ಲೆಯಲ್ಲಿ ಯಾವುದೇ ಖಾಸಗಿ ಬಸ್ ರಸ್ತೆಗಿಳಿದಿರಲಿಲ್ಲ....
ಸುದ್ದಿ

ಮುಲ್ಕಿ ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ಗದ್ದೆಗಿಳಿದ ಖಾಸಗಿ ಬಸ್ – ಕಹಳೆ ನ್ಯೂಸ್

ಮಂಗಳೂರು: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ಗದ್ದೆಗಿಳಿದ ಘಟನೆ ಮುಲ್ಕಿ ಸಮೀಪದ ಕೊಳ್ನಾಡು ಸೇತುವೆ ಬಳಿ ಇಂದು ಬೆಳಗ್ಗೆ ಸಂಭವಿಸಿದೆ. ಉಡುಪಿ ಕಡೆಯಿಂದ ಮಂಗಳೂರಿನತ್ತ ತೆರಳುತ್ತಿದ್ದ ಖಾಸಗಿ ಬಸ್ ಕೊಳ್ನಾಡು ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಾಜಕವನ್ನು ಏರಿ ವಿರುದ್ಧದ ರಸ್ತೆಯನ್ನು ದಾಟಿ ಗದ್ದೆಗೆ ಇಳಿದಿದೆ. ಇದರಿಂದ ಬಸ್ಸಿನಲ್ಲಿದ್ದ ಪ್ರಯಾಣಿಕರಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಅಪಘಾತಕ್ಕೆ ಬಸ್ಸಿನ ಅತಿಯಾದ ವೇಗವೇ...
ಸುದ್ದಿ

ಮಂಡ್ಯ ಬಸ್ ದುರಂತ: ಎಚ್ಚೆತ್ತುಕೊಂಡ ಆರ್ ಟಿ ಓ ಅಧಿಕಾರಿಗಳಿಂದ ಖಾಸಗಿ ಬಸ್ ಮಾಲೀಕರಿಗೆ ನೋಟೀಸ್ – ಕಹಳೆ ನ್ಯೂಸ್

ಚಿಕ್ಕಮಗಳೂರು: ಕೆಲ ದಿನಗಳ ಹಿಂದೆ ಮಂಡ್ಯದಲ್ಲಿ ನಡೆದ ದುರಂತದಿಂದ ಜಿಲ್ಲಾ ಆರ್.ಟಿ.ಒ ಅಧಿಕಾರಿ ಎಚ್ಚೆತ್ತುಕೊಂಡಿದ್ದಾರೆ. ಬಸ್ಸ್ ದುರಂತದಿಂದ ಹಲವು ಮಂದಿ ಸಾವನ್ನಪ್ಪಿ ಗಾಯಗೊಂಡಿದ್ದರು. ಈ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿರುವ 15 ವರ್ಷ ಮೀರಿದ 7 ಖಾಸಗಿ ಬಸ್ಸ್ಗಳು ರಸ್ತೆಗಿಳಿಯದಂತೆ ಆರ್ ಟಿ ಓ ಅಧಿಕಾರಿ ಮುರುಗೇಂದ್ರ ನೋಟೀಸು ನೀಡಿದ್ದಾರೆ. ಒಂದು ವೇಳೆ ಈ ಬಸ್ಸುಗಳು ರಸ್ತೆಗಿಳಿದರೆ ಸೂಕ್ತ ಕ್ರಮಕೈಗೊಳ್ಳಬೇಕಾಗುತ್ತದೆ ಎಂದು ಬಸ್ಸ್ ಮಾಲೀಕರಿಗೆ ಎಚ್ಚರಿಕೆ ನೀಡಿದ್ದಾರೆ....
ಸುದ್ದಿ

ಮಂಗಳೂರಲ್ಲಿ ಬಸ್ ಢಿಕ್ಕಿ; ಪಾದಚಾರಿ ಸ್ಥಳದಲ್ಲೇ ಸಾವು – ಕಹಳೆ ನ್ಯೂಸ್

ಮಂಗಳೂರು: ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಬಸ್ಸೊಂದು ನಿಯಂತ್ರಣ ತಪ್ಪಿ ಪಾದಚಾರಿ ಮೇಲೆ ಹರಿದು ಸಾವನ್ನಪ್ಪಿದ ಘಟನೆ ಮಂಗಳೂರಿನ ಕೂಳೂರಿನಲ್ಲಿ ನಡೆದಿದೆ. ಕೂಳೂರು ನಿವಾಸಿ ಭೋಜ (45), ಮೃತಪಟ್ಟವರು. ಮಂಗಳೂರಲ್ಲಿ ಇಲೆಕ್ಟ್ರಿಶಿಯನ್ ಆಗಿ ಕೆಲಸ ಮಾಡುತ್ತಿದ್ದ ಅವರು ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಅಪಘಾತ ನಡೆದಿದೆ. ಮಂಗಳೂರಿನಿಂದ ಸುರತ್ಕಲ್ ಮಾರ್ಗವಾಗಿ ತೆರಳುತ್ತಿದ್ದ ಖಾಸಗಿ ಬಸ್ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಂಗಳೂರು ನಗರ ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಸುದ್ದಿ

ಮಂಗಳೂರು ಮಹಾನಗರ ಪಾಲಿಕೆಯ ಸಾಮಾನ್ಯ ಸಭೆ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಸಾಮಾನ್ಯ ಸಭೆ ಮಂಗಳವಾರ ಮಂಗಳೂರು ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ನಡೆಯಿತು. ಮೇಯರ್ ಭಾಸ್ಕರ್ ಮೊಯಿಲಿ, ಉಪಮೇಯರ್ ಮೊಹಮದ್, ಆಯುಕ್ತ ನಜಿರ್ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಖಾಸಗಿ ಬಸ್ನವರು ಮಂಗಳೂರು ನಗರದೊಳಗೆ ಮನ ಬಂದಂತ್ತೆ ಪಾರ್ಕಿಂಗ್ ಮಾಡುವಂತದ್ದು , ತಮಗೆ ಇಚ್ಛಿಸುವಲ್ಲಿ ಬಸ್ ಗಳನ್ನು ನಿಲ್ಲಿಸುವಂತಹ ಘಟನೆ ನಡೆಯುತ್ತಿದ್ದು ಪೊಲೀಸರಿಗೆ ಮಾಹಿತಿ ನೀಡಿದರು ಪ್ರಯೋಜನವಾಗುತ್ತಿಲ್ಲ ಎಂದು ಸದಸ್ಯರು ವಿಷಯವನ್ನ ಪ್ರಸ್ತಾಪಿಸಿದರು....
ಸುದ್ದಿ

ನಿಯಂತ್ರಣ ತಪ್ಪಿ ಖಾಸಗಿ ಬಸ್ ಪ್ರಪಾತಕ್ಕೆ: ಇಬ್ಬರು ಸ್ಥಳದಲ್ಲೇ ಸಾವು – ಕಹಳೆ ನ್ಯೂಸ್

ಚಾಮರಾಜನಗರ: ಕರ್ನಾಟಕ-ತಮಿಳುನಾಡು ಗಡಿ ಭಾಗದ ದಿಂಬಮ್​ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪ್ರಪಾತಕ್ಕೆ ಉರುಳಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರಿಗೆ ಗಾಯಗಳಾಗಿವೆ. ಈರೋರಿನ ಎ.ಮುತ್ತು(60), ಗುರುಸ್ವಾಮಿ(45) ಮೃತರೆಂದು ಗುರುತಿಸಲಾಗಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ. ಶುಕ್ರವಾರ ರಾತ್ರಿ 8.30ರ ಸುಮಾರಿಗೆ ಮೈಸೂರಿನಿಂದ ಈರೋಡ್​ಗೆ ತೆರಳುತ್ತಿದ್ದಾಗ 26ನೇ ತಿರುವಿನಲ್ಲಿ ನೂರು ಅಡಿ ಆಳದ ಪ್ರಪಾತಕ್ಕೆ ಬಸ್​ ಬಿದ್ದಿದೆ. ಐವರ ಸ್ಥಿತಿ ಗಂಭೀರ ಎಂದು ತಿಳಿದುಬಂದಿದ್ದು, ಚಾಲಕ, ಮೂವರು ಮಹಿಳೆಯರು ಸೇರಿದಂತೆ 19...