ನನ್ನ ಮೊದಲ ಚಿತ್ರದಲ್ಲೇ ಪುನೀತ್‍ಗೆ ಜೋಡಿಯಾಗಿ ನಟಿಸುತ್ತಿರುವುದು ದೊಡ್ಡ ಅದೃಷ್ಟ: ಪ್ರಿಯಾಂಕಾ
ಸ್ಯಾಂಡಲ್ವುಡ್ ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಚಿತ್ರದಲ್ಲಿ ನಟಿಸುವುದಕ್ಕೆ ಅವಕಾಶ ಸಿಕ್ಕಿರುವ ನನ್ನ ಅದೃಷ್ಟ ಎಂದು ತೆಲುಗು ನಟಿ ಪ್ರಿಯಾಂಕಾ ಜವಾಲ್ಕರ್ ಹೇಳಿದ್ದಾರೆ. ಪವನ್ ಒಡೆಯರ್ ನಿರ್ದೇಶನದ ಇನ್ನು ಹೆಸರಿಡದ ಚಿತ್ರದಲ್ಲಿ ಪುನೀತ್ ರಾಜಕುಮಾರ್ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ತೆಲುಗಿನ ಟ್ಯಾಕ್ಸಿವಾಲಾ ಚಿತ್ರದಲ್ಲಿ ನಟಿಸಿದ್ದ ಪ್ರಿಯಾಂಕಾ ಆಯ್ಕೆಯಾಗಿದ್ದರು. ಇನ್ನು ಮೊದಲ ದಿನದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ಪ್ರಿಯಾಂಕಾ ಅವರು ಸಿಟಿ ಎಕ್ಸ್ ಪ್ರೆಸ್ ಜತೆ ತಮ್ಮ ಅನುಭವವನ್ನು ಹಂಚಿಕೊಂಡರು....