Recent Posts

Thursday, November 21, 2024

archiverain

ಕೊಡಗುಮಡಿಕೇರಿಸುದ್ದಿ

ಮಡಿಕೇರಿ-ಮಂಗಳೂರು ರಸ್ತೆ ಬದಿಯಲ್ಲಿ ಭೂಕುಸಿತ ; ಆರು ಕುಟುಂಬಗಳ ಸ್ಥಳಾಂತರಕ್ಕೆ ಸೂಚನೆ | ಆತಂಕ, ಕತ್ತಲೆಯಲ್ಲಿ ಕೊಡಗು..! – ಕಹಳೆ ನ್ಯೂಸ್

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಎರಡು ದಿನಗಳಿಂದ ಬಿಟ್ಟುಬಿಡದೆ ಧಾರಾಕಾರ ಮಳೆ ಸುರಿಯುತ್ತಿದೆ. ಭಾಗಮಂಡಲ, ನಾಪೋಕ್ಲು, ಮಡಿಕೇರಿ, ಸುಂಟಿಕೊಪ್ಪ ಮತ್ತು ಸೋಮವಾರಪೇಟೆ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಇದರಿಂದಾಗಿ ಕಾವೇರಿ ನದಿ ತುಂಬಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇನ್ನೂ ಮಡಿಕೇರಿ ಮಂಗಳೂರು ಹೆದ್ದಾರಿಯ ಕೆಳಭಾಗದಲ್ಲಿ 2018 ರಲ್ಲಿ ಭೂಕುಸಿತವಾಗಿದ್ದ ಸ್ಥಳದಲ್ಲಿ ಕುಸಿಯುವ ಆತಂಕ ಎದುರಾಗಿದೆ. ಹೀಗಾಗಿ ಅಲ್ಲಿರುವ ಆರು ಕುಟುಂಬಗಳು ಭೂಕುಸಿತದ ಭೀತಿಯಲ್ಲಿವೆ. ಕತ್ತಲೆಯಲ್ಲಿ ಕೊಡಗು: ಸ್ಥಳಕ್ಕೆ ಮಡಿಕೇರಿ ತಹಶೀಲ್ದಾರ್ ಮಹೇಶ್ ಭೇಟಿ...
ದಕ್ಷಿಣ ಕನ್ನಡಸುದ್ದಿ

ಮಂಗಳೂರಿನ ಕುಪ್ಪೆಪದವಿನಲ್ಲಿ ರಸ್ತೆ ಬದಿಯಲ್ಲಿ ತಡೆಗೋಡೆ ಕಾಮಗಾರಿ ನಡೆಯುತ್ತಿದ್ದ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ ಸಿಲುಕಿದ್ದ ವ್ಯಕ್ತಿಯ ರಕ್ಷಣೆ – ಕಹಳೆ ನ್ಯೂಸ್

ಮಂಗಳೂರು: ರಸ್ತೆ ಬದಿಯಲ್ಲಿ ತಡೆಗೋಡೆ ಕಾಮಗಾರಿ ನಡೆಯುತ್ತಿದ್ದ ವೇಳೆ ಗುಡ್ಡ ಕುಸಿದು ಮಣ್ಣಿನೊಳಗೆ ಸಿಲುಕಿದ ವ್ಯಕ್ತಿಯನ್ನು ಸ್ಥಳೀಯರು ಹರಸಾಹಸ ಪಟ್ಟು ರಕ್ಷಿಸಿದ ಘಟನೆ ಮಂಗಳೂರು ತಾಲೂಕಿನ ಕುಪ್ಪೆಪದವು ಬಳಿಯ ನೊನಾಲು ಎಂಬಲ್ಲಿ ನಡೆದಿದೆ. ಮಣ್ಣಿನಡಿ ಸಿಲುಕಿದ್ದ ಬಂಟ್ವಾಳ ತಾಲೂಕಿನ ಅರಳ ಗ್ರಾಮದ ನಿವಾಸಿ ರಾಜೇಶ್ ಪೂಜಾರಿ (28)ಯನ್ನು ರಕ್ಷಿಸಲಾಗಿದ್ದು, ಕುಪ್ಪೆಪದವಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ನೊನಾಲು-ಕುಕ್ಕಟ್ಟೆ-ಗಂಜಿಮಠ ರಸ್ತೆಯಲ್ಲಿ ಗುಡ್ಡ ಕುಸಿಯದಂತೆ ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ರಾಜೇಶ್ ಮತ್ತು...
ಸುದ್ದಿ

ಚಿಕ್ಕಮಗಳೂರಿನಲ್ಲಿ ಮಳೆ ಅಬ್ಬರ: ಮಲೆನಾಡಿನ ಕೆಲ ಭಾಗದಲ್ಲೂ ಮಳೆ – ಕಹಳೆ ನ್ಯೂಸ್

ಚಿಕ್ಕಮಗಳೂರು: ನಗರದಲ್ಲಿ ನಿನ್ನೆ ಭಾರೀ ಮಳೆಯಾಗಿದ್ದು ಬೆಳಗ್ಗೆಯಿಂದಲೂ ಮೋಡಕವಿದ ವಾತಾವರಣ ಸೃಷ್ಠಯಾಗಿತ್ತು. ಸಂಜೆ ಧಾರಾಕಾರ ಮಳೆಯಾಗಿದೆ. ಮಲೆನಾಡಿದ ಕೆಲ ಭಾಗದಲ್ಲೂ ಮೋಡ ಕವಿದ ವಾತಾವರಣ ಅಘೀರ್ಧಧೂ ಸಾಧಾರಣ ಮಳೆಯಾಗಿದೆ....
ಸುದ್ದಿ

ರಾತ್ರಿ ಸುರಿದ ಭಾರೀ ಮಳೆಗೆ ಮನೆ ಕುಸಿದು ವ್ಯಕ್ತಿ ಸಾವು – ಕಹಳೆ ನ್ಯೂಸ್

ಚಿಕ್ಕಮಗಳೂರು: ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಮನೆ ಕುಸಿದು ವ್ಯಕ್ತಿಯೊಬ್ಬ ಸಾವಿಗೀಡಾದ ಘಟನೆ ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಸೀತಾಪುರ ಗ್ರಾಮದಲ್ಲಿ ನಡೆದಿದೆ. ಮಾಯವನ್ ಎಂಬುವವನು ಮೃತಪಟ್ಟ ವ್ಯಕ್ತಿ. ರಾತ್ರಿ ಸುರಿದ ಭಾರೀ ಮಳೆಯಿಂದ ಮನೆಯು ಸಂಪೂರ್ಣ ಕುಸಿದು ಬಿದ್ದ ಕಾರಣದಿಂದಾಗಿ ಈ ಘಟನೆ ನಡೆದಿದೆ ಎನ್ನಲಾಗಿದೆ....
ಸುದ್ದಿ

ಕಹಳೆ Exclusive : ವರುಣನ ಅರ್ಭಟಕ್ಕೆ ಕರಾವಳಿಯ ಅವಳಿ ಜಿಲ್ಲೆಗಳು ತತ್ತರ ; ಎಲೆಲ್ಲಿ ಏನಾಗಿದೆ ? ಸಂಪೂರ್ಣ ಮಾಹಿತಿ – ಕಹಳೆ ನ್ಯೂಸ್

ಮಂಗಳೂರು, ಜುಲೈ.08: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕಳೆದ ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಧಾರಕಾರ ಮಳೆಗೆ ಕರಾವಳಿ ಜಿಲ್ಲೆಗಳ ಜನರ ಜನಜೀವನ ಅಸ್ತವ್ಯಸ್ತವಾಗಿದೆ. ಪುನರ್ವಸು ಮಳೆ ಆರಂಭವಾದಂದಿನಿಂದ ಕರ್ನಾಟಕ ಕರಾವಳಿಯುದ್ದಕ್ಕೂ ಮಳೆಯ ಹೊಡೆತ ಹೆಚ್ಚಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ಎಲ್ಲೆಡೆ ಪ್ರವಾಹದ ವಾತಾವರಣ ಸೃಷ್ಟಿಯಾಗಿದೆ.   ಸ್ವಲ ದಿನ ವಿರಾಮ ಪಡೆದಿದ್ದ ಮಳೆ ಕಳೆದ ಮೂರು ದಿನಗಳಿಂದ ಚುರುಕುಗೊಂಡಿದೆ. ಶುಕ್ರವಾರದಿಂದ ಸುರಿಯಲು ಪ್ರಾರಂಭಿಸಿದ...
ಸುದ್ದಿ

Breaking News : ರಾತ್ರಿಪೂರ್ತಿ ಸುರಿದ ಮಳೆ, ಕರಾವಳಿ ಸೇರಿದಂತೆ ರಾಜ್ಯಾದ್ಯಂತ ವರಣನ ಅಬ್ಬರ ; ಮಂಗಳೂರಿನಲ್ಲಿ ಹೈ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ – ಕಹಳೆ ನ್ಯೂಸ್

ಮಂಗಳೂರು : ರಾಜ್ಯದೆಲ್ಲೆಡೆ ಜೂನ್ 10 ರವರೆಗೆ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಪ್ರಮುಖವಾಗಿ ಕರಾವಳಿಯ ದಕ್ಷಿಣ ಕನ್ನಡ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಹೈ-ಅಲರ್ಟ್ ಘೋಷಿಸಲಾಗಿದೆ. ಮಹಾರಾಷ್ಟ್ರ ಕರಾವಳಿಯಿಂದ ಕೇರಳದವರೆಗೆ ದಟ್ಟಮಾಡಗಳ ಸಾಲು ನಿರ್ಮಾಣವಾಗಿದ್ದು, ಇಂದು (ಜೂನ್ 8 ) ರಂದು ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗಲಿದೆ. ಇದರ ಪರಿಣಾಮ ರಾಜ್ಯದ ಕರಾವಳಿ ಭಾಗದಲ್ಲಿ ಮುಂಗಾರು...
ಸುದ್ದಿ

ಬೆಳ್ಳಂಬೆಳಗ್ಗೆ ರಾಜಧಾನಿಯಲ್ಲಿ ಗುಡುಗು ಸಹಿತ ಮಳೆ – ಕಹಳೆ ನ್ಯೂಸ್

ಬೆಂಗಳೂರು: ರಾಜಧಾನಿಯಲ್ಲಿ ಬೆಳ್ಳಂಬೆಳಗ್ಗೆ ಭಾರಿ ಮಳೆ ಆಗುತ್ತಿದೆ. ಬಿಸಿಲಿನಿಂದ ಬೆಂದ ಜನರಿಗೆ ಪೂರ್ವ ತಂಪೆರೆದಿದ್ದು, ಸೋಮವಾರ ನಗರದ ಹಲವೆಡೆ ಸಂಜೆಯ ವೇಳೆಗೆ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗಿತ್ತು. ಬಿಇಎಲ್ ಸರ್ಕಲ್, ಗಂಗಮ್ಮನಗುಡಿ, ಎಂಎಸ್ ಪಾಳ್ಯ ಮತ್ತಿಕೆರೆ ಯಶವಂತಪುರ ಸೇರಿ ಹಲವಡೆ ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ಈಗ ಭಾರೀ ಮಳೆ ಆಗಿದೆ. ಸಿಲಿಕಾನ್ ಸಿಟಿಯ ಹಲವೆಡೆ ಭಾರೀ ಮಳೆ ಆಗುತ್ತಿದ್ದು, ವಿಜಯನಗರ, ಮಾಗಡಿರೋಡ್, ವೆಸ್ಟ್ ಆಫ್ ಕಾರ್ಡ್ ರೋಡ್, ರಾಜಾಜಿನಗರ ಸೇರಿದಂತೆ...
ಸುದ್ದಿ

ರಾಜ್ಯದ ಹಲವೆಡೆ ಗುಡುಗು, ಮಳೆ; ಇನ್ನೂ 2 ದಿನ ಮುಂದುವರಿಕೆ – ಕಹಳೆ ನ್ಯೂಸ್

ಬೆಂಗಳೂರು (ಏ. 17):  ಆಗ್ನೇಯ ಹಾಗೂ ಕರಾವಳಿ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಮತ್ತು ದಟ್ಟಮೋಡಗಳಿಂದಾಗಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸೋಮವಾರ ಗುಡುಗು ಸಹಿತ ಭಾರಿ ಮಳೆಯಾಗಿದ್ದು, ಇನ್ನೂ ಎರಡು ದಿನ ರಾಜ್ಯದಲ್ಲಿ ಮಳೆ ಬೀಳಲಿದೆ.      ರಾಜ್ಯದ ದಕ್ಷಿಣ ಒಳನಾಡು, ಉತ್ತರ ಒಳನಾಡು ಮತ್ತು ಕರಾವಳಿ ಭಾಗದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯಾಗಿದೆ. ಮಹಾರಾಷ್ಟ್ರ, ಕೇರಳ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಇರುವುದರಿಂದ ದಟ್ಟಮೋಡಗಳು...
1 2
Page 1 of 2