Saturday, November 23, 2024

archiveRama mandira

ಸುದ್ದಿ

ವ್ಯಾಪಕ ಚರ್ಚೆಗೊಳಗಾದ ಸಚಿವ ಗಿರಿರಾಜ್ ಸಿಂಗ್ ಹೇಳಿಕೆ – ಕಹಳೆ ನ್ಯೂಸ್

ಬಾಗ್‌ಪಥ್‌: ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಖಾತೆಯ ರಾಜ್ಯ ಸಚಿವ ಗಿರಿರಾಜ್ ಸಿಂಗ್ ಬಾಗ್‌ಪಥ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ವಿವಾದಿತ ಹೇಳಿಕೆಯೊಂದನ್ನು ನೀಡಿದ್ದಾರೆ. ಜನಸಂಖ್ಯಾ ನಿಯಂತ್ರಣ ರ‍್ಯಾಲಿಯಲ್ಲಿ ಭಾಗವಹಿಸಿದ ಇವರು ಮುಸ್ಲಿಮರು ರಾಮನ ವಂಶಸ್ಥರು, ಮೊಘಲ್ ವಂಶಸ್ಥರಲ್ಲ. ಆದ್ದರಿಂದ ಅವರು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವನ್ನು ಬೆಂಬಲಿಸಬೇಕು, ಹಿಂದೂಗಳು ಅವರನ್ನು ದ್ವೇಷಿಸುತ್ತಾರೆ ಎನ್ನುವುದು ಅವರಿಗೆ ಚೆನ್ನಾಗಿ ಗೊತ್ತು. ಈ ದ್ವೇಷ ಹೆಚ್ಚಿದರೆ, ಪರಿಣಾಮ ಏನಾಗಬಹುದು ಎಂದು ಕಲ್ಪಿಸಿಕೊಳ್ಳಿ ಗಿರಿರಾಜ್ ಸಿಂಗ್ ವಿವಾದಾತ್ಮಕ...
ಸುದ್ದಿ

Breaking News : ಮೋದಿ ಅಧಿಕಾರದ ಐದು ವರ್ಷ ಪೂರ್ಣಕ್ಕೆ ಮೊದಲೇ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ; ಶಿಯಾ ವಕ್ಫ್ ಬೋರ್ಡ್ ನಿಂದ ಮಹತ್ವದ ನಿರ್ಧಾರ – ಕಹಳೆ ನ್ಯೂಸ್

ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಬೇಕೇ ಹೊರತು ಮಸೀದಿ ಅಲ್ಲ, ರಾಮಮಂದಿರ ವಿವಾದವನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳುವುದಾಗಿ ಕೇಂದ್ರ ಶಿಯಾ ವಕ್ಫ್ ಮಂಡಳಿ ಶುಕ್ರವಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ. ರಾಮಮಂದಿರ ಹಾಗೂ ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಸುಪ್ರೀಂ ಕೋರ್ಟ್ ಶುಕ್ರವಾರ ವಿಚಾರಣೆಯನ್ನು ನಡೆಸಿತ್ತು. ಈ ವೇಳೆ ಸುಪ್ರಿಂ ಕೋರ್ಟ್ ಗೆ ಕೇಂದ್ರ ಶಿಯಾ ವಕ್ಫ್ ಮಂಡಳಿಯು ಅಲಹಾಬಾದ್ ಹೈಕೋರ್ಟ್ ತಮಗೆ ನೀಡಿರುವ ಮೂರನೇ ಒಂದರಷ್ಟು ಭೂಮಿಯನ್ನು ರಾಮ ಮಂದಿರ ನಿರ್ಮಾಣ...
ಸುದ್ದಿ

ಅಯೋಧ್ಯೆ ವಿವಾದ ಇತ್ಯರ್ಥಕ್ಕೆ ಡಿ.6ರೊಳಗೆ ಕರಡು ಸಿದ್ದ | ನಿರ್ಮಾಣವಾಗಲಿದೆ ಭವ್ಯ ಮಂದಿರ.

ಲಕ್ನೋ : ಅಯೋಧ್ಯಾ ವಿವಾದವನ್ನು ಶಾಂತಿಯುತವಾಗಿ ಇತ್ಯರ್ಥ ಪಡಿಸುವ ಪ್ರಸ್ತಾವವೊಂದರ ಕರಡನ್ನು ಡಿ.6ರೊಳಗೆ (1992ರಲ್ಲಿ ಬಾಬರಿ ಮಸೀದಿ ಧ್ವಂಸಗೊಂಡ ದಿನ) ತಾನು ಸಿದ್ಧಪಡಿಸುವುದಾಗಿ ಉತ್ತರ ಪ್ರದೇಶ ಶಿಯಾ ಸೆಂಟ್ರಲ್‌ ವಕ್‌ಫ್ ಮಂಡಳಿ ಹೇಳಿದೆ. ಮಂಡಳಿ ಅಧ್ಯಕ್ಷ ವಾಸಿಂ ರಿಜ್ವಿ ಅವರು ಮಾಧ್ಯಮದೊಂದಿಗೆ ಮಾತನಾಡುತ್ತಾ ಈ ತಿಂಗಳಲ್ಲಿ ನಾನು ಅಯೋಧ್ಯೆಗೆ ಭೇಟಿ ನೀಡಿ ಅಲ್ಲಿನ ಸಾಧುಗಳು ಹಾಗೂ ಮಹಾಂತರನ್ನು ಭೇಟಿಯಾಗುತ್ತೇನೆ ಎಂದು ಹೇಳಿದರು. ಆಯೋಧ್ಯಾ ವಿವಾದವನ್ನು ಪರಸ್ಪರ ತಿಳಿವಳಿಕೆ ಮತ್ತು ಹೊಂದಾಣಿಕೆಯ ನೆಲೆಯಲ್ಲಿ ಶಾಂತಿಯುತವಾಗಿ...