ತುಳು ಭಾಷೆ ಅಭಿವೃದ್ಧಿಗೆ ಅಕಾಡೆಮಿ ವತಿಯಿಂದ ಎಲ್ಲಾ ಪ್ರಯತ್ನ ನಡೆಸಲಾಗುವುದು: ಎ.ಸಿ.ಭಂಡಾರಿ – ಕಹಳೆ ನ್ಯೂಸ್
ಸುಳ್ಯ: ತುಳು ಭಾಷೆ, ಸಂಸ್ಕೃತಿ ಮತ್ತು ಸಾಹಿತ್ಯದ ಬೆಳವಣಿಗೆಗೆ ತುಳು ಸಾಹಿತ್ಯ ಅಕಾಡೆಮಿಯ ವತಿಯಿಂದ ನಿರಂತರ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರಲಾಗುತ್ತಿದೆ. ತುಳು ಭಾಷೆಯ ಅಭಿವೃದ್ಧಿಗೆ ಅಕಾಡೆಮಿಯ ವತಿಯಿಂದ ಎಲ್ಲಾ ಪ್ರಯತ್ನವನ್ನೂ ನಡೆಸಲಾಗುವುದು ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಎ.ಸಿ.ಭಂಡಾರಿ ಹೇಳಿದ್ದಾರೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸಹಯೋಗದಲ್ಲಿ ಸುಳ್ಯ ಶ್ರಿ ಚೆನ್ನಕೇಶವ ದೇವಸ್ಥಾನದ ಮುಂಭಾಗದ ಶ್ರೀ ಶಾರದಾಂಬಾ ವೇದಿಕೆಯಲ್ಲಿ ಮಂಗಳವಾರ ನಡೆದ ಸುಳ್ಯ ತಾಲೂಕು ಪ್ರಥಮ ತುಳು ಸಾಹಿತ್ಯ...