ನಾಡದೋಣಿಗಳ ಸಹಾಯದಿಂದ ಅಕ್ರಮ ಮರಳುಗಾರಿಕೆ: ಸೊತ್ತು ವಶಕ್ಕೆ – ಕಹಳೆ ನ್ಯೂಸ್
ಬಂಟ್ವಾಳ : ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ಎಂಬಲ್ಲಿ ಸೋಮವಾರ ತಡರಾತ್ರಿ ನಾಡದೋಣಿಗಳ ಸಹಾಯದಿಂದ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದದ್ದನ್ನು ಪತ್ತೆಹಚ್ಚಿದ ಬಂಟ್ವಾಳ ಎಎಸ್ಪಿ ಸೊನಾವಣೆ ಋಷಿಕೇಷ್ ಭಗವಾನ್ ನೇತೃತ್ವದ ಪೊಲೀಸರ ತಂಡ ಅಂದಾಜು 12 ಲಕ್ಷ ಬೆಲೆಬಾಳುವ ಸೊತ್ತುಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಖಚಿತ ವರ್ತಮಾನದ ಹಿನ್ನೆಲೆಯಲ್ಲಿ ಬಂಟ್ವಾಳ ಎಸ್ಪಿ, ಗ್ರಾಮಾಂತರ ಠಾಣಾಧಿಕಾರಿ ಯವ ನೇತೃತ್ವದ ತಂಡ ದಾಳಿ ನಡೆಸಿದೆ. ಈ ವೇಳೆ 2 ನಾಡ ದೊಣಿಗಳ ಸಹಾಯದಿಂದ ಮರಳು ಗಾರಿಕೆ ನಡೆಸಿ...