ಫೆ. 15 ರಿಂದ ಮಾ. 22 ವರೆಗೆ ಉಪ್ಪಿನಂಗಡಿಯಲ್ಲಿ ” ಮಖೆ ಜಾತ್ರೆ” – ” ಮಹಾಕಾಳಿ ಮೆಚ್ಚಿ ” – ” ದೊಂಪದ ಬಲಿ ” ಸಂಭ್ರಮ ; ಶ್ರೀ ಸಹಸ್ರಲಿಂಗೇಶ್ವರ, ಮಹಾಕಾಳಿ ದೇವಸ್ಥಾನದಲ್ಲಿ ಕಾಲಾವಧಿ ಜಾತ್ರೆ, ವರ್ಷಾವಧಿ ಉತ್ಸವ – ಕಹಳೆ ನ್ಯೂಸ್
ಉಪ್ಪಿನಂಗಡಿ: ಗಯಾಪದ ಕ್ಷೇತ್ರ, ದಕ್ಷಿಣಕಾಶಿ ಎಂದೇ ಕರೆಯಲ್ಪಡುವ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನ ಇದರ ಕಾಲಾವಧಿ ಜಾತ್ರೆ, ಮಖೆ ಜಾತ್ರೆ ಮತ್ತು ಉತ್ಸವಾದಿಗಳು ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಪವಿತ್ರಪಾಣಿ ಕರಾಯ ವಿಷ್ಣುಮೂರ್ತಿ ಕುದ್ದಣ್ಣಾಯರ ಉಪಸ್ಥಿತಿಯಲ್ಲಿ ಫೆ. ೧೫ರಿಂದ ಆರಂಭಗೊಂಡು ವಿವಿಧ ಧಾರ್ಮಿಕ ಕಾರ್‍ಯಕ್ರಮಗಳೊಂದಿಗೆ ಮಾರ್ಚ್ ೨೨ರ ತನಕ ನಡೆಯಲಿದೆ ಎಂದು ದೇವಳದ ಆಡಳಿತಾಧಿಕಾರಿ ಮತ್ತು ಕಾರ್‍ಯನಿರ್ವಹಣಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಫೆ. ೧೫ರಂದು ೧ನೇ ಅಷ್ಟಮಿ ಮಖೆ...