Saturday, November 23, 2024

archiveUT Khadar

ಸುದ್ದಿ

ಯು.ಟಿ.ಖಾದರ್ ಹುಟ್ಟುಹಬ್ಬದ ನಿಮಿತ್ತ ಹಣ್ಣು ಹಂಪಲು ವಿತರಣೆ – ಕಹಳೆ ನ್ಯೂಸ್

ಮಂಗಳೂರು: ನಗರಾಭಿವೃದ್ಧಿ ಖಾತೆ ಸಚಿವ ಯು.ಟಿ.ಖಾದರ್ ಅವರ ಹುಟ್ಟುಹಬ್ಬದ ನಿಮಿತ್ತ ಫರಂಗಿಪೇಟೆಯ ಟುಡೇ ಫೌಂಡೇಶನ್ ವತಿಯಿಂದ ಬಂಟ್ವಾಳದ ಸರಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಿಸಲಾಯಿತು. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎಫ್. ಉಮರ್ ಫಾರೂಕ್ ಅವರ ನೇತೃತ್ವದಲ್ಲಿ ಟುಡೇ ಫೌಂಡೇಶನ್‌ನ ಸದಸ್ಯರು ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು. ಈ ವೇಳೆ ರಮ್ಲಾನ್ ಮಾರಿಪಳ್ಳ, ಹಾಸೀರ್ ಪೇರಿಮಾರ್, ಪ್ರವೀಣ್ ತುಂಬೆ, ಮಜೀದ್ ಫರಂಗಿಪೇಟೆ ಮತ್ತಿತ್ತರರು ಉಪಸ್ಥಿತರಿದ್ದರು....
ಸುದ್ದಿ

ಕಸಾಯಿಖಾನೆ ವಿವಾದ: ಸಚಿವ ಯುಟಿ ಖಾದರ್ ಪರ ನಿಂತ ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್ – ಕಹಳೆ ನ್ಯೂಸ್

ಮಂಗಳೂರು: ಸ್ಮಾರ್ಟ್ ಸಿಟಿ ಯೋಜನೆಯಡಿ ಕುದ್ರೋಳಿ ಕಸಾಯಿಖಾನೆ ಅಭಿವೃದ್ಧಿ ಸೇರ್ಪಡೆ ವಿಚಾರವೂ ವಿವಾದಗೊಳ್ಳುತ್ತಿರುವ ಮಧ್ಯೆಯೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯುಟಿ ಖಾದರ್ ಪರ ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್ ನಿಂತಿದೆ. ನಗರದ ಖಾಸಗಿ ಹೋಟೆಲ್ನಲ್ಲಿ ಸುದ್ದಿಗೋಷ್ಠಿ ನಡೆಸಿದ ಜೆಡಿಎಸ್ ಜಿಲ್ಲಾಧ್ಯಕ್ಷ ಮಹಮ್ಮದ್ ಕುಂಞಿ ಕಸಾಯಿಖಾನೆಯ ವಿಚಾರದಲ್ಲಿ ಸಚಿವ ಖಾದರ್ ಸಲಹೆ ನಷ್ಟೇ ನೀಡಿದ್ದಾರೆ ಅವರು ಏಕಪಕ್ಷೀಯವಾಗಿ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ . ಕಸಾಯಿಖಾನೆಯ ಅಭಿವೃದ್ಧಿಗೆ ಹದಿನೈದು ಕೋಟಿ...
ಸುದ್ದಿ

ಫೇಸ್‌ಬುಕ್‌ನಲ್ಲಿ ಖಾದರ್ ಬಗ್ಗೆ ಅವಹೇಳನಕಾರಿ ಪೋಸ್ಟ್: ಅಭಿಮಾನಿ ಬಳಗದಿಂದ ದೂರು – ಕಹಳೆ ನ್ಯೂಸ್

ಮಂಗಳೂರು: ಕಸಾಯಿಖಾನೆ ವಿವಾದದ ಬಳಿಕ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಕುರಿತು ಫೇಸ್ ಬುಕ್‌ನಲ್ಲಿ ಚಿತ್ರ ವಿರೂಪಗೊಳಿಸಿ ಅವಹೇಳನಕಾರಿಯಾಗಿ ಬರೆಯಲಾಗಿದ್ದು , ತಪ್ಪಿತಸ್ಥರನ್ನು ಆರೋಪಿಗಳನ್ನು ತಕ್ಷಣವೇ ಬಂಧಿಸುವಂತೆ ಆಗ್ರಹಿಸಿ ಪೋಲಿಸ್ ಆಯುಕ್ತರಿಗೆ ದೂರು ನೀಡಲಾಗಿದೆ. ‘ಹನಿ ಹಿಂದೂಸ್ತಾನಿ ಮಂಗಳೂರು ಹಿಂದು’ ಎಂಬ ಹೆಸರಿನ ಫೇಸ್‌ಬುಕ್ ಖಾತೆಯಲ್ಲಿ ಸಚಿವ ಯು.ಟಿ.ಖಾದರ್ ಅವರನ್ನು ಅಶ್ಲೀಲ ಪದಗಳನ್ನು ಬಳಸಿ ನಿಂದಿಸಿ, ಸಚಿವರ ಮಾನಹಾನಿ ಗೈಯಲಾಗಿದೆ ಎಂದು ಆರೋಪಿಸಿ, ಯು.ಟಿ.ಖಾದರ್ ಅಭಿಮಾನಿ ಬಳಗದ...
ಸುದ್ದಿ

ಸ್ವಚ್ಛತೆಯ ಉದ್ದೇಶದಿಂದ ಕಸಾಯಿಖಾನೆಯನ್ನು ಆಧುನೀಕರಣಗೊಳಿಸಲು ಸಲಹೆ ನೀಡಲಾಗಿದೆ: ಖಾದರ್ – ಕಹಳೆ ನ್ಯೂಸ್

ಮಂಗಳೂರು: ನಗರ ಸ್ವಚ್ಛವಾಗಿರಬೇಕೆಂಬ ಹಿನ್ನೆಲೆಯಲ್ಲಿ ಕುದ್ರೋಳಿ ಕಸಾಯಿಖಾನೆಯನ್ನು ಆಧುನೀಕರಣಗೊಳಿಸಲು ಸಲಹೆ ನೀಡಲಾಗಿದೆ. ಆದರೆ ಬಿಜೆಪಿ ಜನಪ್ರತಿನಿಧಿಗಳು ಇದರ ಬಗ್ಗೆ ತಪ್ಪು ಮಾಹಿತಿ ಹರಡುತ್ತಿದ್ದಾರೆ ಎಂದು ಉಸ್ತುವಾರಿ ಸಚಿವ ಯು.ಟಿ.ಖಾದರ್ ಅಸಮಾಧಾನ ವ್ಯಕ್ತಪಡಿಸಿದರು. ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಖಾದರ್ ಅವರು ಕಸಾಯಿಖಾನೆಗೆ 15 ಕೋಟಿ ರೂ. ನೀಡಿದ್ದಾರೆಂಬ ಆರೋಪದ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದ ಅವರು, ಬಿಜೆಪಿ ಜನಪ್ರತಿನಿಧಿಗಳು ಕೇಂದ್ರದ ನಗರಾಭಿವೃದ್ಧಿ ಸಚಿವಾಲಯಕ್ಕೆ ಪತ್ರ ಬರೆದು ಇದನ್ನು ನಿಲ್ಲಿಸಲಿ ಎಂದು ಸವಾಲು ಹಾಕಿದರು. 2011ರಲ್ಲಿ...