ಇವನರ್ವ, ಇವನರ್ವ ಎಂದು ಡೈಲಾಗ್ ಹೇಳಿದ್ದಕ್ಕೆ ಯಕ್ಷಗಾನ ಹಾಸ್ಯ ಕಲಾವಿದ ಅಮಾನತು! – ಕಹಳೆ ನ್ಯೂಸ್
ಮಂಗಳೂರು: ಯಕ್ಷಗಾನದಲ್ಲಿ ರಾಜಕೀಯ ಪ್ರೇರಿತ ಪದವನ್ನು ಬಳಕೆ ಮಾಡಿದ್ದಕ್ಕೆ ಕಟೀಲು ಮೇಳದ ಹಾಸ್ಯ ಕಲಾವಿದರು ತಾತ್ಕಾಲಿಕವಾಗಿ ಅಮಾನತುಗೊಂಡಿದ್ದಾರೆ. ಏಪ್ರಿಲ್ 1 ರಂದು ಪಡುಮರ್ನಾಡ್ ಬಳಿಯ ಬನ್ನಡ್ಕ ಎಂಬಲ್ಲಿ ನಡೆದಿದೆ ಎನ್ನಲಾದ ಯಕ್ಷಗಾನ ಕಾರ್ಯಕ್ರಮದಲ್ಲಿ ಹಾಸ್ಯ ಕಲಾವಿದ ಪೂರ್ಣೇಶ್ ಆಚಾರ್ಯ ಪ್ರಸಂಗದ ಒಂದು ಸನ್ನಿವೇಶದಲ್ಲಿ “ಇವನರ್ವ, ಇವನರ್ವ” ಎಂದು ಡೈಲಾಗ್ ಹೇಳಿದ್ದರು. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿತ್ತು. ಇದಾದ ಕೆಲವೇ ದಿನಗಳಲ್ಲಿ ಬೆಂಗಳೂರು ಮತ್ತು ಮಂಗಳೂರು ಚುನಾವಣಾ ಆಯೋಗದ ಕಚೇರಿಯಿಂದ...