Recent Posts

Saturday, September 21, 2024

archiveಕಹಳೆ ನ್ಯೂಸ್

ದಕ್ಷಿಣ ಕನ್ನಡಸುದ್ದಿ

ಮಂಗಳೂರು : ಮೆಡಿಕಲ್ ಕಾಲೇಜಿನ ಎಂಬಿಬಿಎಸ್ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ – ಕಹಳೆ ನ್ಯೂಸ್

ಮಂಗಳೂರು: ಎಂ.ಬಿ.ಬಿ.ಎಸ್ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರು ಹೊರವಲಯದ ಕುತ್ತಾರು ಎಂಬಲ್ಲಿನ ಸಿಲಿಕಾನಿಯಾ ಅಪಾರ್ಟ್‍ಮೆಂಟ್ ನಲ್ಲಿ ನಡೆದಿದೆ. ಮೂಲತಃ ಬೀದರ್ ನಿವಾಸಿಯಾಗಿರುವ ಪ್ರಸ್ತುತ ದೇರಳಕಟ್ಟೆಯ ಕಣಚೂರು ಮೆಡಿಕಲ್ ಕಾಲೇಜಿನಲ್ಲಿ ಎಂ.ಬಿ.ಬಿ.ಎಸ್ ವ್ಯಾಸಂಗ ಮಾಡುತ್ತಿದ್ದ ವೈಶಾಲಿ ಗಾಯಕ್ ವಾಡ್ (25) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ತನ್ನ ಸಹಪಾಠಿಯ ಜೊತೆ ವಾಸವಾಗಿದ್ದ, ವೈಶಾಲಿ ಶನಿವಾರದಂದು ಪ್ರತ್ಯೇಕ ಕೊಠಡಿಯಲ್ಲಿ ಮಲಗಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ರವಿವಾರದಂದು ವೈಶಾಲಿ ರೂಂನಿಂದ...
ಸುದ್ದಿಹಾಸನ

ಹಾಸನ: ಲಾರಿ – ಬೈಕ್ ನಡುವೆ ಭೀಕರ ಅಪಘಾತ: ಪೋಷಕರ ಎದುರಲ್ಲೇ ಮಕ್ಕಳ ಸಾವು – ಕಹಳೆ ನ್ಯೂಸ್

ಹಾಸನ: ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದು ಬೈಕ್ ನಲ್ಲಿ ತೆರಳುತ್ತಿದ್ದ, ಅವಳಿ ಮಕ್ಕಳು ದಾರುಣವಾಗಿ ಮೃತಪಟ್ಟ ಘಟನೆ ಹಾಸನದಲ್ಲಿ ನಡೆದಿದೆ. ಅವಳಿ ಮಕ್ಕಳಾದ ಮೂರು ವರ್ಷದ ಪ್ರಣವ್ ಮತ್ತು ಪ್ರಣತಿ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿರುವ  ಪೋಷಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಚಕ್ರಕ್ಕೆ ಸಿಲುಕಿ ಮಕ್ಕಳ ದೇಹಗಳು ಗುರುತು ಸಿಗದಷ್ಟು ಛಿದ್ರವಾಗಿವೆ. ಪರಾರಿಯಾಗಲೆತ್ನಿಸಿದ ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮದ್ಯಪಾನ ಮಾಡಿ ವಾಹನ ಚಾಲನೆ...
ಸುದ್ದಿ

ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಕಲಬುರ್ಗಿ ಜಿಲ್ಲಾಧ್ಯಕ್ಷರಾಗಿ ಮಹೇಶ್ ಎಚ್ ತೆಲಗಿ ಆಯ್ಕೆ – ಕಹಳೆ ನ್ಯೂಸ್

ಕಲಬುರ್ಗಿ : ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ, ರೈತ, ಕಾರ್ಮಿಕ ಶೋಷಿತ ಕನ್ನಡ ಪರ ಸಂಘಟನೆ ಕಲಬುರ್ಗಿಯ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷರನ್ನಾಗಿ ಮಹೇಶ್ ಎಚ್ ತೆಲಗಿ ಅವರು ಆಯ್ಕೆಯಾಗಿದ್ದಾರೆ. ಮಹೇಶ್ ಎಚ್ ತೆಲಗಿ ಅವರು ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದು, ಇವರ ಸಮಾಜಮುಖಿ ಕಾರ್ಯಗಳನ್ನ ಪರಿಗಣಿಸಿ ತಾಯಿ ಶ್ರೀ ಭುವನೇಶ್ವರಿಯ ಹಾಗೂ ಈ ನಾಡಿನ ಸೇವೆಯನ್ನು ಮಾಡಲು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಕಲಬುರ್ಗಿ ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ....
ದಕ್ಷಿಣ ಕನ್ನಡಸುದ್ದಿ

ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ- ಕಹಳೆ ನ್ಯೂಸ್

ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಇಂದು ಬಿಡುಗಡೆಯಾಗಿದೆ. ಶ್ರೀಕ್ಷೇತ್ರದ ಆಡಳಿತ ಮೊಕ್ತೇಸರರಾದ ಕೆ ಕೇಶವಾಚಾರ್ಯರವರ ಸಮ್ಮುಖದಲ್ಲಿ ದೇವರಿಗೆ ಪ್ರಾರ್ಥನೆ ಸಲ್ಲಿಸಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಕ್ಷೇತ್ರದ ಅರ್ಚಕರಾದ ವಿಘ್ನೇಶ್ ಪುರೋಹಿತ್ , ಸದಸ್ಯರಾದ ಪುರುಷೋತ್ತಮ್ ಆಚಾರ್ಯ ಪುತ್ತೂರು, ಜೀರ್ಣೋದ್ದಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ಮ. ವೆಂಕಟೇಶ್, ಕಾರ್ಯದರ್ಶಿ ರವೀಂದ್ರ. ಎಸ್, ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಗುರುರಾಜ್ ಕೆ ಜೆ, ಕಾರ್ಯದರ್ಶಿ ರಾಜೇಶ್...
ದಕ್ಷಿಣ ಕನ್ನಡಸುದ್ದಿಸುಳ್ಯ

ಸುಳ್ಯ: ದ್ವಿಚಕ್ರ ವಾಹನ ಚಲಾಯಿಸಿದ ಅಪ್ರಾಪ್ತ ಬಾಲಕ: ಪೋಷಕರಿಗೆ 10 ಸಾವಿರ ದಂಡ ವಿಧಿಸಿದ ಕೋರ್ಟ್- ಕಹಳೆ ನ್ಯೂಸ್

ಸುಳ್ಯ : ದ್ವಿಚಕ್ರ ವಾಹನ ಚಲಾಯಿಸಿದ ಅಪ್ರಾಪ್ತ ಬಾಲಕನ ಪೋಷಕರಿಗೆ ಕೋರ್ಟ್ 10 ಸಾವಿರ ದಂಡ ವಿಧಿಸಿದ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ ಸುರೇಶ ಎಂಬವರ ಮಗ ಬೈಕ್ ಚಲಾಯಿಸಿಕೊಂಡು ಹೋಗುತ್ತಿದ್ದ ಸಂದರ್ಭ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಈ ಪ್ರಕರಣದ ವಿಚಾರಣೆ ನಡೆಸಿದ ಸುಳ್ಯ ನ್ಯಾಯಾಲಯ ಪೋಷಕರಿಗೆ 10,000 ರೂ. ದಂಡ ವಿಧಿಸಿದೆ. ಈ ಕುರಿತು ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ...
ದಕ್ಷಿಣ ಕನ್ನಡಬಂಟ್ವಾಳ

ಕಾರಿಂಜೇಶ್ವರ ಕ್ಷೇತ್ರ ಸಂರಕ್ಷಣೆಯ ಕಾರ್ಯಕ್ಕೆ ಸಾತ್ ನೀಡಲಿದ್ದಾರೆ ಜಿಲ್ಲೆಯ ಮಠಾಧೀಶರು– ಕಹಳೆ ಕಹಳೆ ನ್ಯೂಸ್

 ಕಾರಿಂಜೇಶ್ವರ ಕ್ಷೇತ್ರ ಸಂರಕ್ಷಣೆಯ ಕಾರ್ಯಕ್ಕೆ ಜಿಲ್ಲೆಯ ಮಠಾಧೀಶರು ಸಾತ್ ನೀಡಲಿದ್ದು, ಡಿಸೆಂಬರ್ 20 ಸೋಮವಾರ ಮಧ್ಯಾಹ್ನ 11 ಗಂಟೆಗೆ ಶ್ರೀ ಕ್ಷೇತ್ರಕ್ಕೆ ಕಾರಿಂಜಕ್ಕೆ ಭೇಟಿ ನೀಡಲಿದ್ದಾರೆ.  ಗಣಿಗಾರಿಕೆಯಿಂದ ಹಾನಿಗೀಡಾಗಿರುವ ಕ್ಷೇತ್ರದ ಪರಿಸರ ವೀಕ್ಷಣೆಗೆ, ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದಂಗಳವರು ಜಗದ್ಗುರು ಮಧ್ವಾಚಾರ್ಯ ಮಹಾಸಂಸ್ಥಾನ ಕುಕ್ಕೆ ಸುಬ್ರಮಣ್ಯ, ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿ ವಜ್ರದೇಹಿ ಮಠ ಗುರುಪುರ, ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಶ್ರೀಧಾಮ ಮಾಣಿಲ, ಶ್ರೀ ಶ್ರೀ...
ದಕ್ಷಿಣ ಕನ್ನಡಸುದ್ದಿ

ರಾಜ್ಯ ಒಕ್ಕಲಿಗ ಸಂಘದ ಚುನಾವಣೆಯಲ್ಲಿ ಜಯ ಗಳಿಸಿದ ಡಾಕ್ಟರ್ ರೇಣುಕಾಪ್ರಸಾದ್ ರವರಿಗೆ ಅಭಿನಂದನೆ ತಿಳಿಸಿದ ಹೇಮಾನಂದ ಗೌಡ- ಕಹಳೆ ನ್ಯೂಸ್

ಡಿ.12 ರಂದು ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಸ್ಥಾನಕ್ಕೆ ಒಕ್ಕಲಿಗರ ಸಂಘದಿಂದ ಚುನಾವಣೆ ನಡೆದಿದ್ದು, ಚುನಾವಣೆಯ ಕಣಕ್ಕೆ ಇಳಿದಿದ್ದ ಡಾ.ಕೆ.ವಿ.ರೇಣುಕಾಪ್ರಸಾದ್‍ರವರಿಗೆ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಸ್ಥಾನ ಒಲಿದು ಬಂದಿದೆ. ರಾಜ್ಯ ಒಕ್ಕಲಿಗ ಸಂಘದ ಚುನಾವಣೆಯಲ್ಲಿ ಜಯ ಗಳಿಸಿದ ಡಾಕ್ಟರ್ ರೇಣುಕಾಪ್ರಸಾದ್ ರವರಿಗೆ ಹೇಮಾನಂದ ಗೌಡ ಅಭಿನಂದನೆ ತಿಳಿಸಿದ್ದಾರೆ. “ರಾಜ್ಯ ಒಕ್ಕಲಿಗ ಸಂಘದ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಡಾಕ್ಟರ್ ರೇಣುಕಾಪ್ರಸಾದ್ ರವರು ಜಯ ಗಳಿಸಿದ್ದಾರೆ. ಅವರಿಗೆ ತುಂಬು ಹೃದಯದ ಅಭಿನಂದನೆಗಳು...
ದಕ್ಷಿಣ ಕನ್ನಡಸುದ್ದಿ

ಬಿಜೆಪಿ ಯುವ ಮೋರ್ಚಾ ಉಪ್ಪಿನಂಗಡಿ ಮಹಾಶಕ್ತಿ ಕೇಂದ್ರದ ಮತ್ತು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಉಪ್ಪಿನಂಗಡಿ ಮಹಾಶಕ್ತಿ ಕೇಂದ್ರ : ಉಪ್ಪಿನಂಗಡಿಯಲ್ಲಿ ಗಲಭೆ ನಡೆಸಿದವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಮನವಿ : ಉಪ್ಪಿನಂಗಡಿ ಆರಕ್ಷಕ ಠಾಣೆಯ ಠಾಣಾಧಿಕಾರಿಯವರಿಗೆ ಮನವಿ ಸಲ್ಲಿಕೆ -ಕಹಳೆ ನ್ಯೂಸ್

ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಉಪ್ಪಿನಂಗಡಿ ಮಹಾಶಕ್ತಿ ಕೇಂದ್ರದ ಮತ್ತು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಉಪ್ಪಿನಂಗಡಿ ಮಹಾಶಕ್ತಿ ಕೇಂದ್ರದ ವತಿಯಿಂದ, ಉಪ್ಪಿನಂಗಡಿಯಲ್ಲಿ ಗಲಭೆ ನಡೆಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಉಪ್ಪಿನಂಗಡಿ ಆರಕ್ಷಕ ಠಾಣೆಯ ಠಾಣಾಧಿಕಾರಿಯವರಿಗೆ ಮನವಿಯನ್ನು ಸಲ್ಲಿಸಲಾಯಿತು. ದಿನಾಂಕ 14/12/2021 ರಂದು ದಿನವಿಡೀ ರಸ್ತೆಯಲ್ಲಿ ಪ್ರತಿಭಟನೆ ನಡೆಸಿ, ರಸ್ತೆಯಲ್ಲಿ ನಾಗರಿಕರ ಸಂಚಾರಕ್ಕೆ ತಡೆಯೊಡ್ಡಿದ ಹಾಗೂ ಆಂಬುಲೆನ್ಸ್ ನಲ್ಲಿ ಅಕ್ರಮವಾಗಿ ಮಾರಕಾಯುಧಗಳನ್ನು ಇರಿಸಿ ಪೋಲೀಸರ ಮೇಲೆ...
1 27 28 29 30 31 126
Page 29 of 126