Wednesday, January 22, 2025

archiveಕಹಳೆ ನ್ಯೂಸ್

ಸುದ್ದಿ

ಪದವಿನಂಗಡಿಯ ಬೆನಕ ಸಭಾಂಗಣದಲ್ಲಿ ನಡೆದ ಭಾರತೀಯ ಜನತಾ ಪಾರ್ಟಿಯ ಉತ್ತರ ಮಂಡಲದ ಕಾರ್ಯ ನಿರ್ವಹಣಾ ಸಭೆ- ಕಹಳೆ ನ್ಯೂಸ್

ಮಂಗಳೂರು: ಭಾರತೀಯ ಜನತಾ ಪಾರ್ಟಿಯ ಮಂಗಳೂರು ನಗರ ಉತ್ತರ ಮಂಡಲದ ಕಾರ್ಯ ನಿರ್ವಹಣಾ ತಂಡದ ಸಭೆ ಪದವಿನಂಗಡಿಯ ಬೆನಕ ಸಭಾಂಗಣದಲ್ಲಿ ಜರುಗಿತು. ಮಂಗಳೂರು ನಗರ ಉತ್ತರದ ಶಾಸಕರಾದ ಡಾ.ಭರತ್ ಶೆಟ್ಟಿ ವೈಯವರು ಸಭೆಯನ್ನು ಉದ್ಘಾಟಿಸಿದರು. ಸಭೆಯಲ್ಲಿ ಉತ್ತರ ಮಂಡಲದ ಭಾರತೀಯ ಜನತಾ ಪಾರ್ಟಿ ಅಧ್ಯಕ್ಷರಾದ ತಿಲಕರಾಜ್ ಕೃಷ್ಣಾಪುರ, ಜಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕಸ್ತೂರಿ ಪಂಜ, ಜಿಲ್ಲಾ ಉಪಾಧ್ಯಕ್ಷೆ ಪ್ರಭಾಮಾಲಿನಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು....
ಬಂಟ್ವಾಳ

ದೇವಂದಬೆಟ್ಟು ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ನಡೆಯುತ್ತಿರುವ ಜೀರ್ಣೋದ್ಧಾರ ಕಾರ್ಯಗಳನ್ನು ಪರಿಶೀಲಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ- ಕಹಳೆ ನ್ಯೂಸ್

ದೇವಂದಬೆಟ್ಟು ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಭೇಟಿನೀಡಿ ಬ್ರಹ್ಮಕಲಶೋತ್ಸವದ ಪ್ರಯುಕ್ತ ನಡೆಯುತ್ತಿರುವ ಜೀರ್ಣೋದ್ಧಾರ ಕಾರ್ಯಗಳನ್ನು ಪರಿಶೀಲಿಸಿ, ಬಳಿಕ ಮಾತನಾಡಿದ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುತ್ತು ರವರು, ದೇವಂದಬೆಟ್ಟು ದೇವಸ್ಥಾನ ಸಂಪರ್ಕಿಸುವ ರಸ್ತೆಗಳ ಅಭಿವೃದ್ಧಿ, ಕುಡಿಯುವ ನೀರಿಗೆ ಪ್ರತ್ಯೇಕ ಕೊಳವೆ ಬಾವಿ ವ್ಯವಸ್ಥೆ, ಮತ್ತು ತಡೆಗೋಡೆ ನಿರ್ಮಾಣಕ್ಕೆ ಸಹಕಾರ ನೀಡಲಾಗುವುದು. ಕಳ್ಳಿಗೆ ಸೇರಿದಂತೆ ಹಲವು ಗ್ರಾಮಗಳಿಗೆ ಮನೆಮನೆಗೆ ಸಂಪರ್ಕಿಸುವ ಕುಡಿಯುವ ನೀರಿನ ಯೋಜನೆಗೆ 180 ಕೋ.ರೂ. ವೆಚ್ಚದಲ್ಲಿ ಯೋಜನೆಯನ್ನು...
ಬೆಳ್ತಂಗಡಿ

ಶ್ರೀ ಕ್ಷೇತ್ರ ದೈಪಾಲಬೆಟ್ಟ ಶ್ರೀ ದೈವ ಕೊಡಮಣಿತ್ತಾಯ ಹಾಗೂ ಬ್ರಹ್ಮಬೈದರ್ಕಳ ಇದರ ಬ್ರಹ್ಮಕಲಶೋತ್ಸವದ ವಿಜ್ಞಾಪನಾ ಪತ್ರ ಬಿಡುಗಡೆ- ಕಹಳೆ ನ್ಯೂಸ್

ಶ್ರೀ ಕ್ಷೇತ್ರ ದೈಪಾಲಬೆಟ್ಟ ಶ್ರೀ ದೈವ ಕೊಡಮಣಿತ್ತಾಯ ಹಾಗೂ ಬ್ರಹ್ಮಬೈದರ್ಕಳ ಇದರ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಸಾನಿಧ್ಯ ಅಭಿವೃದ್ಧಿ ಧಾರ್ಮಿಕ ವಿಧಿ ವಿಧಾನ ಹಾಗೂ ಬ್ರಹ್ಮಕಲಶೋತ್ಸವ ವಿಜ್ಞಾಪನಾ ಪತ್ರ ಬಿಡುಗಡೆ ಸಮಾರಂಭ ಮತ್ತು ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಯಿತು....
ಸುದ್ದಿ

ವಿಶ್ವ ಸಾರಸ್ವತ್ ಸಂಗಮಕ್ಕೆ ಮಂಗಳೂರಿನಲ್ಲಿ ಕಾಶೀಮಠಾಧೀಶರಿಂದ ಚಾಲನೆ; ಸಾರಸ್ವತ್ ಅವೇಕ್ನಿಂಗ್ ಪುಸ್ತಕ ಬಿಡುಗಡೆ – ಕಹಳೆ ನ್ಯೂಸ್

ವಿಶ್ವಾದ್ಯಂತ ಇರುವ ಸಾರಸ್ವತ ಸಮುದಾಯದ ಸಮ್ಮೇಳನ " ವಿಶ್ವ ಸಾರಸ್ವತ ಸಂಗಮ" ಭಾನುವಾರ ಮಂಗಳೂರಿನ ಕೊಂಚಾಡಿಯಲ್ಲಿರುವ ವನಿತಾ ಅಚ್ಯುತ್ ಪೈ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಕಾಶೀಮಠಾಧೀಶರಾದ ಶ್ರೀಮದ್ ಸಂಯಂಮೀಂದ್ರ ತೀರ್ಥ ಸ್ವಾಮೀಜಿಯವರು ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಶ್ರೀಮದ್ ಸಂಯಂಮೀಂದ್ರ ತೀರ್ಥ ಸ್ವಾಮೀಜಿಯವರ ಕಾಶ್ಮೀರ ಭೇಟಿಯ ಸಮಗ್ರ ಮಾಹಿತಿಗಳನ್ನು ಒಳಗೊಂಡ " ಸಾರಸ್ವತ್ ಎವೇಕ್ನಿಂಗ್" ಪುಸ್ತಕದ ಪ್ರಥಮ ಪ್ರತಿಯನ್ನು ಶ್ರೀಗಳು ಪದ್ಮಶ್ರೀ ಪುರಸ್ಕೃತ ಡಾ. ಕಾಶೀನಾಥ ಪಂಡಿತ್ ಅವರಿಗೆ ನೀಡುವ...
ಸುದ್ದಿ

ಬೆಟ್ಟಂಪಾಡಿ ಪದವಿ ಕಾಲೇಜಿನಲ್ಲಿ NSS ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ – ಕಹಳೆ ನ್ಯೂಸ್

ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ವಾರ್ಷಿಕ ಕಾರ್ಯ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು. ಕಾಲೇಜು ಅಭಿವೃದ್ಧಿ ಸಮಿತಿಯ ಹಿರಿಯ ಸದಸ್ಯರಾದ ಶ್ರೀ ರಂಗನಾಥ ರೈ ಗುತ್ತು ಇವರು ಘಟಕ ನಾಯಕರುಗಳಿಗೆ ಸಸಿ ಹಸ್ತಾಂತರಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಗ್ರಾಮೀಣ ಅಭಿವೃದ್ಧಿಯಲ್ಲಿ NSS ನ ಪಾತ್ರ ಬಹಳ ಮಹತ್ತರವಾದದ್ದು, ಸ್ವಯಂ ಸೇವಕರ ಸಕ್ರಿಯ ತೊಡಗಿಸಿಕೊಳ್ಳುವಿಕೆಯು ಯಶಸ್ವಿ ಕಾರ್ಯಕ್ರಮಗಳನ್ನು ಆಯೋಜಿಸುವಲ್ಲಿ ಪ್ರಮುಖ ಪಾತ್ರ...
ಬಂಟ್ವಾಳ

ವೀರಕಂಭ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಜಿ ಅಂಗನವಾಡಿ ಕೇಂದ್ರದಲ್ಲಿ ಕೋವಿಡ್ ಲಸಿಕೆ ಮಹಾ ಅಭಿಯಾನ ಕಾರ್ಯಕ್ರಮ- ಕಹಳೆ ನ್ಯೂಸ್

ಬಂಟ್ವಾಳ: ಕೋವಿಡ್ ಲಸಿಕೆ ಮಹಾ ಅಭಿಯಾನ ಕಾರ್ಯಕ್ರಮವು ವೀರಕಂಭ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರಕಾರಿ ಪ್ರಾಥಮಿಕ ಶಾಲೆ ಮಜಿ ಬಳಿ ಇರುವ ಮಜಿ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು. ಸಮುದಾಯ ಆರೋಗ್ಯ ಕೇಂದ್ರ ವಿಟ್ಲ ಉಪಕೇಂದ್ರ ವೀರಕಂಬದ ಪ್ರಾಥಮಿಕ ಆರೋಗ್ಯ ಸುರಕ್ಷಣಾ ಅಧಿಕಾರಿ ಶ್ರೀಮತಿ ಜ್ಯೋತಿ ಕೆ ಎನ್ ,ಸಮುದಾಯ ಆರೋಗ್ಯ ಕೇಂದ್ರದ ಆರ್ ಕೆ ಎಸ್ ಕೆ ಕೌನ್ಸಿಲರ್ ಶೃತಿ ,ಆಶಾ ಕಾರ್ಯಕರ್ತೆ ಶ್ರೀಮತಿ ಲೀಲಾವತಿ, ಮಜಿ ಅಂಗನವಾಡಿ ಕಾರ್ಯಕರ್ತೆ...
ಸುದ್ದಿ

ಉಳಾಯಿಬೆಟ್ಟುವಿನಲ್ಲಿ 8 ವರ್ಷದ ಬಾಲಕಿ ಅತ್ಯಾಚಾರ ಹಿನ್ನಲೆ : ಪೋಷಕರಿಗೆ ಸಾಂತ್ವನ ಹೇಳಿದ ಶಾಸಕ ವೇದವ್ಯಾಸ್ ಕಾಮತ್- ಕಹಳೆ ನ್ಯೂಸ್

ಮಂಗಳೂರು: ಉಳಾಯಿಬೆಟ್ಟುವಿನಲ್ಲಿ 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ವೇದವ್ಯಾಸ್ ಕಾಮತ್ ಅವರ ಮನೆಗೆ ತೆರಳಿ ಪೋಷಕರಿಗೆ ಸಾಂತ್ವನ ಹೇಳಿದರು. ಈ ವೇಳೆ ಮಾತನಾಡಿದ ಶಾಸಕ ಕಾಮತ್, ಪುಟ್ಟ ಮಗುವಿನ ಮೇಲೆ ಪೈಶಾಚಿಕ ಕೃತ್ಯ ಎಸಗಿರುವವರಿಗೆ ಕಾನೂನಿನಡೆ ಘೋರ ಶಿಕ್ಷೆ ವಿಧಿಸಬೇಕು. ಮುಂದೆ ಎಂದೂ ಇಂತಹ ಘಟನೆ ನಡೆಯದಂತೆ ತಡೆಯಲು ಅಪರಾಧಿಗಳಿಗೆ ದಂಡನೆ ನೀಡಬೇಕು ಎಂದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ್...
ಪುತ್ತೂರು

ಪುತ್ತೂರು: ಕೊಂಬೆಟ್ಟು ಕಾಲೇಜಿನಲ್ಲಿ ನಡೆದ ಹಲ್ಲೆ ಪ್ರಕರಣ: ಮಹಿಳಾ ಪೊಲೀಸ್ ಠಾಣೆಗೆ ಕರೆದೊಯ್ದ ವಿದ್ಯಾರ್ಥಿಗಳನ್ನು ಅವರವರ ಮನೆಗೆ ತಲುಪಿಸಿದ ಪೊಲೀಸರು- ಕಹಳೆ ನ್ಯೂಸ್

ಪುತ್ತೂರು: ಕೊಂಬೆಟ್ಟು ಕಾಲೇಜಿನಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಪೊಲೀಸ್ ಠಾಣೆಗೆ ಕರೆದೊಯ್ದ ವಿದ್ಯಾರ್ಥಿಗಳನ್ನು ಪೊಲೀಸರು ಅವರವರ ಮನೆಗೆ ತಲುಪಿಸಿದ್ದಾರೆ. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ವಿದ್ಯಾರ್ಥಿಗಳನ್ನು ಅಪ್ರಾಪ್ತರೆಂಬ ನೆಲೆಯಲ್ಲಿ ಮಹಿಳಾ ಪೊಲೀಸ್ ಠಾಣೆಯ ಮಕ್ಕಳ ಮತ್ತು ಮಹಿಳೆಯರ ಅಪ್ತ ಸಮಾಲೋಚನಾ ಆಸರೆ ಎಂಬ ವಿಭಾಗಕ್ಕೆ 7 ಮಂದಿ ನಗರ ಪೊಲೀಸ್ ಠಾಣೆಯ ಕರೆತಂದಿದ್ದ ಪೊಲೀಸರು ವಿದ್ಯಾರ್ಥಿಗಳ ಮನ ಪರಿವರ್ತನ ಕಾರ್ಯದ ಬಳಿಕ ಅವರವರ ಮನೆಗೆ ಸುರಕ್ಷಿತವಾಗಿ ಕಳುಹಿಸಿದರು....
1 39 40 41 42 43 126
Page 41 of 126