ತಾಂತ್ರಿಕ ಶಿಕ್ಷಣ ಆಧಾರಿತ ಪ್ರೌಢಶಾಲೆ ಆರಂಭ: ಸಿಎಂ ಬಸವರಾಜ ಬೊಮ್ಮಾಯಿ – ಕಹಳೆ ನ್ಯೂಸ್
ಹುಬ್ಬಳ್ಳಿ :‘ಪ್ರೌಢಶಾಲಾ ಹಂತದಿಂದಲೇ ತಾಂತ್ರಿಕ ಶಿಕ್ಷಣ ಸಿಗುವಂತಾಗಬೇಕು' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯ ಡೆನಿಸನ್ಸ್ ಹೋಟೆಲ್ನಲ್ಲಿ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಬಿಯಾಂಡ್ ಬೆಂಗಳೂರು ‘ಇನ್ನೋವೇಷನ್ & ಇಂಪ್ಯಾಕ್ಟ್ ಹುಬ್ಬಳ್ಳಿ' ಕಾರ್ಯಕ್ರಮವನ್ನು ವರ್ಚುವಲ್ ಆಗಿ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ‘1960ರಲ್ಲಿಯೇ ಹುಬ್ಬಳ್ಳಿಯಲ್ಲಿ ತಾಂತ್ರಿಕ ಶಿಕ್ಷಣ ನೀಡುವ ಪ್ರೌಢಶಾಲೆ ಇತ್ತು. ಮುಂದೆ ಅದು ಬಂದ್ ಆಯಿತು. ತಾಂತ್ರಿಕ ಶಿಕ್ಷಣದಿಂದ ಮಕ್ಕಳಲ್ಲಿ ಗ್ರಹಿಸುವ...