Friday, September 20, 2024

archiveಮಳೆ

ಕೊಡಗುಮಡಿಕೇರಿಸುದ್ದಿ

ಮಡಿಕೇರಿ-ಮಂಗಳೂರು ರಸ್ತೆ ಬದಿಯಲ್ಲಿ ಭೂಕುಸಿತ ; ಆರು ಕುಟುಂಬಗಳ ಸ್ಥಳಾಂತರಕ್ಕೆ ಸೂಚನೆ | ಆತಂಕ, ಕತ್ತಲೆಯಲ್ಲಿ ಕೊಡಗು..! – ಕಹಳೆ ನ್ಯೂಸ್

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಎರಡು ದಿನಗಳಿಂದ ಬಿಟ್ಟುಬಿಡದೆ ಧಾರಾಕಾರ ಮಳೆ ಸುರಿಯುತ್ತಿದೆ. ಭಾಗಮಂಡಲ, ನಾಪೋಕ್ಲು, ಮಡಿಕೇರಿ, ಸುಂಟಿಕೊಪ್ಪ ಮತ್ತು ಸೋಮವಾರಪೇಟೆ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಇದರಿಂದಾಗಿ ಕಾವೇರಿ ನದಿ ತುಂಬಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇನ್ನೂ ಮಡಿಕೇರಿ ಮಂಗಳೂರು ಹೆದ್ದಾರಿಯ ಕೆಳಭಾಗದಲ್ಲಿ 2018 ರಲ್ಲಿ ಭೂಕುಸಿತವಾಗಿದ್ದ ಸ್ಥಳದಲ್ಲಿ ಕುಸಿಯುವ ಆತಂಕ ಎದುರಾಗಿದೆ. ಹೀಗಾಗಿ ಅಲ್ಲಿರುವ ಆರು ಕುಟುಂಬಗಳು ಭೂಕುಸಿತದ ಭೀತಿಯಲ್ಲಿವೆ. ಕತ್ತಲೆಯಲ್ಲಿ ಕೊಡಗು: ಸ್ಥಳಕ್ಕೆ ಮಡಿಕೇರಿ ತಹಶೀಲ್ದಾರ್ ಮಹೇಶ್ ಭೇಟಿ...
ದಕ್ಷಿಣ ಕನ್ನಡಸುದ್ದಿ

ಮಂಗಳೂರಿನ ಕುಪ್ಪೆಪದವಿನಲ್ಲಿ ರಸ್ತೆ ಬದಿಯಲ್ಲಿ ತಡೆಗೋಡೆ ಕಾಮಗಾರಿ ನಡೆಯುತ್ತಿದ್ದ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ ಸಿಲುಕಿದ್ದ ವ್ಯಕ್ತಿಯ ರಕ್ಷಣೆ – ಕಹಳೆ ನ್ಯೂಸ್

ಮಂಗಳೂರು: ರಸ್ತೆ ಬದಿಯಲ್ಲಿ ತಡೆಗೋಡೆ ಕಾಮಗಾರಿ ನಡೆಯುತ್ತಿದ್ದ ವೇಳೆ ಗುಡ್ಡ ಕುಸಿದು ಮಣ್ಣಿನೊಳಗೆ ಸಿಲುಕಿದ ವ್ಯಕ್ತಿಯನ್ನು ಸ್ಥಳೀಯರು ಹರಸಾಹಸ ಪಟ್ಟು ರಕ್ಷಿಸಿದ ಘಟನೆ ಮಂಗಳೂರು ತಾಲೂಕಿನ ಕುಪ್ಪೆಪದವು ಬಳಿಯ ನೊನಾಲು ಎಂಬಲ್ಲಿ ನಡೆದಿದೆ. ಮಣ್ಣಿನಡಿ ಸಿಲುಕಿದ್ದ ಬಂಟ್ವಾಳ ತಾಲೂಕಿನ ಅರಳ ಗ್ರಾಮದ ನಿವಾಸಿ ರಾಜೇಶ್ ಪೂಜಾರಿ (28)ಯನ್ನು ರಕ್ಷಿಸಲಾಗಿದ್ದು, ಕುಪ್ಪೆಪದವಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ನೊನಾಲು-ಕುಕ್ಕಟ್ಟೆ-ಗಂಜಿಮಠ ರಸ್ತೆಯಲ್ಲಿ ಗುಡ್ಡ ಕುಸಿಯದಂತೆ ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ರಾಜೇಶ್ ಮತ್ತು...